ಜಿಲ್ಲೆ

ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ ಕೇಸು ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

Mangaluru - Hariprasad Rai


ಮಂಗಳೂರು : ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂ ಕುಸಿತ ಸಾಧ್ಯತೆ ಉಂಟಾಗುವ ಕಾರಣ ತಾತ್ಕಾಲಿಕವಾಗಿ ಭೂಮಿ ಅಗೆತ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು : ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕ ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಉಪಸ್ಥಿತರಿದ್ದರು.