ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರವು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಎರಡೂವರೆ ವರ್ಷದ ಬಳಿಲ ಜಾರಕಿಹೊಳಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಸಿಕ್ಕಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಮೇಸ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಯನ್ನು ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಅವರಿಗೆ ನೀಡಿತ್ತು. ಜಿಲ್ಲೆಯಲ್ಲಿ ಸಚಿವರು ಇದ್ದರು ತವರು ಜಿಲ್ಲೆಯ ಉಸ್ತುವಾರಿ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಸಚಿವ ಸತೀಶ ಜಾರಕಿಹೊಳಿ ಅವರಿಗೆ ತವರು ಜಿಲ್ಲೆಯ ಉಸ್ತುವಾರಿ ನೀಡುವ ಮೂಲಕ ಜಾರಕಿಹೊಳಿ ಕುಟುಂಬಕ್ಕೆ ಶಕ್ತಿ ನೀಡಿದೆ. ಮತ್ತೊಂದೆಡೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ನೀಡುವ ಮೂಲಕ ಬೆಳಗಾವಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ಕಲ್ಪಿಸಿದಂತಾಗಿದೆ.