ಜಿಲ್ಲೆ

ಜೂ.12ರಂದು ಕೃಷಿ ಸಚಿವ ಜಿಲ್ಲೆಗೆ ಆಗಮನ

ಮಂಜುನಾಥ ಕೋಳಿಗುಡ್ಡ


 ಬೆಳಗಾವಿ: ಕಿತ್ತೂರು ಕರ್ನಾಟಕ ಭಾಗದಲ್ಲಿ ಕೃಷಿ ಚಟುವಟಿಕೆಗಳ ಕುರಿತು ರಾಜ್ಯ ಕೃಷಿ ಸಚಿವ ಎನ್.ಚಲುರಾಯಸ್ವಾಮಿ ಜೂ.12ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
  ಜೂ.12ರಂದು ಬೆಳಗ್ಗೆ 5 ಗಂಟೆಗೆ ವಿಶೇಷ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ  ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ  ಧಾರವಾಡ ಕೃಷಿ ವಿವಿ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ತದನಂತರ ಮಧ್ಯಾಹ್ನ 2.30ಕ್ಕೆ ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳಲ್ಲಿ  ಕೃಷಿ ಚಟುವಟಿಕೆಗಳು, ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹ, ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.