ಜಿಲ್ಲೆ

ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ರಸ್ತೆಗಿಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿಯನ್ನು ನೀಡದಿರುವುದನ್ನು ಖಂಡಿಸಿ ಮಂಗಳವಾರ ಸಚಿವರು,ಶಾಸಕರು ಕೈಯಲ್ಲಿ ಅಕ್ಕಿ ಬುಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಕ್ಕಿ ತುಂಬಿದ ಬುಟ್ಟಿ ಕೈಯಲ್ಲಿ ಹಿಡಿದು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು.‌ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಶಾಸಕ ರಾಜು ಸೇಠ್, ಪಾಲಿಕೆಯ ಕಾಂಗ್ರೆಸ್ ಸದಸ್ಯರು ಸಾಥ್ ನೀಡಿದರು.