ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿ ಪರಿಶೀಲಿಸಿ, ಸಲಹೆಸೂಚನೆಗಳನ್ನು ನೀಡಿದರು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು