RemasterDirector_1a5c03258 
ಜಿಲ್ಲೆ

26ರಂದು ಸಿಎಂ ಸಿದ್ದರಾಮಯ್ಯ ಆಗಮನ

ಎ. ಆರ್. ರಘುರಾಮ

ಅಧಿಕಾರಿಗಳ ಸಭೆಯಲ್ಲಿ ಸಚಿವ ಕೆ.ವೆಂಕಟೇಶ್ ವಿವರ

ಪಿರಿಯಾಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಏ. 26ರಂದು ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.ತಾಪಂ ಸಭಾಂಗಣದಲ್ಲಿ ಮಂಗಳವಾರ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖ ಹಮ್ಮಿ ಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ಪಡೆದು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ನೀಡಿ ಬೆಂಬಲಿಸಿದ್ದಾರೆ. ಇತ್ತೀಚಿಗೆ ಮಂಜೂರಾಗಿರುವ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆಗೆ ಏ.26ರಂದು ಆಗಮಿಸುತ್ತಿದ್ದಾರೆ ಎಂದು ವಿವರಿಸಿದರು.

ಡಾ. ಅಂಬೇಡ್ಕರ್ ಜಯಂತಿಯ ಸಂದರ್ಭ ಮಹನೀಯರ ಭಾವಚಿತ್ರವಿಟ್ಟು ಗೌರವಿಸಬೇಕು.ಮುಖ್ಯಮಂತ್ರಿಗಳ ಮೂಲಕ ವಿವಿಧ ಇಲಾಖೆಯ ವತಿಯಿಂದ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು. ವಿವಿಧ ಕಾಮಗಾರಿಗಳಿಗೂ ಚಾಲನೆ ನೀಡಲಾಗುವುದು.ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಕಾರ್ಯಕ್ರಮ ಯಶಗೊಳಿಸ ಬೇಕು ಎಂದು ಸಚಿವ ವೆಂಕಟೇಶ್ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿ ಇ ಒ ಮುಖೇಶ್ ಕುಮಾರ್, ಹುಣಸೂರು ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತಹಸೀಲ್ದಾರ್ ನಿಸರ್ಗ ಪ್ರಿಯ, ತಾ ಪಂ ಇಒ ಸುನೀಲ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಚಂದ್ರಶೇಖರ, ಪ್ರಸಾದ್, ರವಿ ಪ್ರಸನ್ನ, ಡಾ. ಸೋಮಯ್ಯ, ಕೃಷ್ಣಗೌಡ, ಹಿತೇಂದ್ರ, ಸಣ್ಣಸ್ವಾಮಿ, ವೆಂಕಟೇಶ್, ಪೊಲೀಸ್ ವೃತ್ತ ನಿರೀಕ್ಷಕ ಗೋವಿಂದರಾಜ್, ವಿವಿಧ ಇಲಾಖೆಗಳ ಇಂಜಿನಿಯರ್‌ಗಳಾದ ವೆಂಕಟೇಶ್, ಕುಮಾರ್, ಕೃಷ್ಣಮೂರ್ತಿ,ರಕ್ಷಿತ್ ದಿನೇಶ್, ಮಲ್ಲಿಕಾರ್ಜುನ, ಪದ್ಮಾ ಇತರರು ಇದ್ದರು.