ಬಳ್ಳಾರಿ ತಾಲೂಕಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್‌ಮಿಶ್ರಾ, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಇತರರಿದ್ದರು.  
ಜಿಲ್ಲೆ

ನೀರು ಶುದ್ಧೀಕರಣ ಘಟಕಕ್ಕೆ ಸಚಿವ ನಾಗೇಂದ್ರ ಭೇಟಿ

Bellari - Heera Nayak

ಬಳ್ಳಾರಿ: ತಾಲೂಕಿನ ಸಂಗನಕಲ್ಲು ಸಮೀಪದ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಗರಕ್ಕೆ ಸ್ವಚ್ಛ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಸಂಗ್ರಾಹಾಗಾರಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಯಮಿತವಾಗಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಸಂಗ್ರಹಿತ ನೀರನ್ನು ಪರೀಕ್ಷಿಸಿ ಪರಿಶೀಲಿಸಿ ಕುಡಿಯಲು ಬಳಸಲು ಯೋಗ್ಯವಾಗಿದೆ ಎಂದು ತಿಳಿದುಕೊಂಡು ನೀರು ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇನ್ನಿತರ ಸೌಲಭ್ಯಗಳು ಬೇಕಾದಲ್ಲಿ ಗಮನಕ್ಕೆ ತಂದರೆ, ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್‌ಮಿಶ್ರಾ, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ನಗರ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರು ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.