ಜಿಲ್ಲೆ

ಶಾಸಕಾಂಗ ಸಭೆಯಲ್ಲಿ ಸಚಿವ ಸ್ಥಾನದ ಚರ್ಚೆಯಾಗಿಲ್ಲ

ರಾಯಚೂರು: ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಥವಾ ಇಲಾಖೆ ನಿರ್ವಹಣೆ ಕುರಿತು ಚರ್ಚೆಯಾಗಿಲ್ಲ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು. ನಗರದ ಹೊರವಲಯದ ಯರಮರಸ್ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೇವೆ ಮತ್ತು ನಿಷ್ಠೆಯನ್ನು ಮನಗಂಡು ಸಚಿವ ಸ್ಥಾನ

ಪಕ್ಷದ ನಾಯಕರು ಸೇವೆ ಮತ್ತು ನಿಷ್ಠೆಯನ್ನು ಮನಗಂಡು ಸಚಿವ ಸ್ಥಾನ ನೀಡಿದ್ದಾರೆ. ಸಚಿವನಾದ ನಂತರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು. ಇಲಾಖೆಯಲ್ಲಿ ಶಾಸಕರ ಕೆಲಸ ಮತ್ತು ಪತ್ರಗಳನ್ನು ನೋಡಿಕೊಳ್ಳಲು ಪ್ರತ್ಯೇಕ ಸಿಬ್ಬಂದಿ ನೇಮಿಸಲಾಗಿದೆ. ಅವರು ಶಾಸಕರ ಪತ್ರಗಳ ಬಗ್ಗೆ ಫಾಲೋಅಪ್ ಮಾಡಿ ಮಾಹಿತಿ ನೀಡುತ್ತಿದ್ದಾರೆ. ರಾಯಚೂರನ್ನು ನೋಡಲ್ ತಾಲೂಕನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಅಭಿವೃದ್ಧಿಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: