ಜಿಲ್ಲೆ

ಕೈನಲ್ಲು ತ್ಯಾಗದ ಮನೋಭಾವನೆ ಕ್ಷೀಣ!

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು: ಇಡೀ ಸಮಾಜದಲ್ಲಿ ತ್ಯಾಗದ ಮನೋಭಾವನೆ ಕಡಿಮೆಯಾಗಿದ್ದು ಸ್ವಾಭಾವಿಕವಾಗಿ ಕಾಂಗ್ರೆಸ್​ ಪಕ್ಷದಲ್ಲು "ತ್ಯಾಗ' ಕ್ಷೀಣಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅವರ "ತ್ಯಾಗ'ದ ಮಾತು ಅರ್ಥವಾಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಮಾಡಿದ್ದು ಅಂತಹ ತ್ಯಾಗ, ಬಲಿದಾನ ಈಗಿನ ಆಧುನಿಕ ಸಮಾಜದಲ್ಲಿ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ಹೇಳಿರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಕಾಂಗ್ರೆಸ್​ ಪಕ್ಷದಲ್ಲಿ ಮಾತ್ರ ತ್ಯಾಗ ಕಡಿಮೆಯಾಗಿಲ್ಲ, ಇಡೀ ಸಮಾಜದಲ್ಲಿ ತ್ಯಾಗದ ಮನೋಭಾವನೆ ಕ್ಷೀಣಿಸಿದೆ. ಹಾಗೆಯೇ ಸ್ವಾಭಾವಿಕವಾಗಿ ಕಾಂಗ್ರೆಸ್​ನಲ್ಲು "ತ್ಯಾಗ' ಕಡಿಮೆಯಾಗಿದೆ ಎಂದು ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್​ ಮುಂದಿನ ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೆ ಬಗ್ಗೆ ಶ್ರೀಮಠದಲ್ಲಿ ಯಾವುದೇ ರಾಜಕೀಯ ಮಾತನಾಡಲ್ಲ ಎಂದು ನುಣುಚಿಕೊಂಡರು.