ಜಿಲ್ಲೆ

ನ.7 , 8 ರಂದು ಜಿಲ್ಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಪ್ರವಾಸ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ನವೆಂಬರ್ ೭ ರಂದು ಬೆಳಿಗ್ಗೆ ೯.೩೫ ಗಂಟೆಗೆ ಕಲಬುರಗಿಗೆ ಆಗಮಿಸುವರು.


ಕಲಬುರಗಿ:: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ನವೆಂಬರ್ ೭ ರಂದು ಬೆಳಿಗ್ಗೆ ೯.೩೫ ಗಂಟೆಗೆ ಕಲಬುರಗಿಗೆ ಆಗಮಿಸುವರು.
  ಅಂದು ಬೆಳಿಗ್ಗೆ ೯.೩೫ ರಿಂದ ಬೆಳಿಗ್ಗೆ ೧೦.೩೦ ಗಂಟೆಯವರೆಗೆ ಕಾನೂನು, ಸಂಸದೀಯ, ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವರೊಂದಿಗೆ ಶಹಾಬಜಾರ ಮಸೀದಿ, ಖಾಜಾ ಬಂದೇ ನವಾಜ್ ಮಸೀದಿ ಹಾಗೂ ಕಲಬುರಗಿ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವರು. ೧೧.೩೦ ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಚಿತ್ತಾಪುರ ತಾಲೂಕಿನ ನಾಗಾವಿಗೆ ಭೇಟಿ ಮಾಡಿ ವೀಕ್ಷಣೆ ನಡೆಸುವರು. ಮಧ್ಯಾಹ್ನ ೩.೩೦ ರಿಂದ ಸಂಜೆ ೫ ಗಂಟೆಯವರೆಗೆ ಸೇಡಂ ತಾಲೂಕಿನ ಮಳಖೇಡ ಕೋಟೆ ವೀಕ್ಷಣೆ ಮಾಡುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
 ನ. ೮ ರಂದು ಬೆಳಿಗ್ಗೆ ೧೦.೪೫ ರಿಂದ ಮಧ್ಯಾಹ್ನ ೧೨.೩೦ ಗಂಟೆಯವರೆಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಆಳಂದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಆಳಂದದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಕಾಮಗಾರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಅಂದು ಮಧ್ಯಾಹ್ನ ೨ ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು