ಬಳ್ಳಾರಿ : ಇಲ್ಲಿನ ಬಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ 79ನೇ ಸ್ವಾತಂತ್ರೃದಿನಾಚರಣೆಯ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನೆರವೇರಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ನಗರದ ರೈಲು ನಿಲ್ದಾಣ ಹಾಗೂ ಬಿಮ್ಸ್ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾರ್ಲಾಪಣೆ ಮಾಡಲಿದ್ದಾರೆ ಎಂದು ಅಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
==