ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್, ಜನಸಾಮಾನ್ಯರಂತೆ ರಸ್ತೆ ಬದಿ ಊಟ ಸೇವಿಸಿದರು.
ದೊಡ್ಡಬಿದರಕಲ್ಲು ವಾರ್ಡ್ನಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಕುಳಿತು ಅನ್ನ, ರಸಂ ಸೇವಿಸಿದ ಸಚಿವರ ಸರಳತೆಯನ್ನು ಕಂಡು ಸಾರ್ವಜನಿಕರು ಅಚ್ಚರಿ ವ್ಯಕ್ತಪಡಿಸಿದರು.
ಅಂಧ್ರಹಳ್ಳಿ, ದೊಡ್ಡಬಿದರಕಲ್ಲು ವಾರ್ಡ್ ನಲ್ಲಿ ಸೋಮಶೇಖರ್ ಪ್ರಚಾರ ನಡೆಸಿದರು. ಈ ವೇಳೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.
ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್, ವಾರ್ಡ್ನ ಜನತೆ ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ. ಅತಿ ಹೆಚ್ಚು ಮತಗಳು ಈ ಭಾಗದಿಂದ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೊಡ್ಡಬಿದರಕಲ್ಲು 2ನೇ ಅತಿದೊಡ್ಡ ವಾರ್ಡ್ ಎನಿಸಿದ್ದು, ಬಹುತೇಕ ರಸ್ತೆಗಳಲ್ಲಿ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ, ರಾಜ ಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಸೋಮಶೇಖರ್ ಹೇಳಿದರು.