ಕೊಪ್ಪಳದಲ್ಲಿ ಶನಿವಾರ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್​, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಇದ್ದರು. 
ಜಿಲ್ಲೆ

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಿ, ಸಚಿವ ಶಿವರಾಜ ತಂಗಡಗಿ ಸೂಚನೆ

ಕೊಪ್ಪಳ: ಬರುವ ವಾರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲೆ, ತಾಲೂಕು ಅಧಿಕಾರಿಗಳು ಸಜ್ಜಾಗಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್​ನಲ್ಲಿ ಉತ್ತಮ ಮಳೆಯಾದರೆ, ಜುಲೈನಲ್ಲಿ ಆಗಲಿಲ್ಲ. ಮುಂದಿನ ವಾರ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಅಧಿಕಾರಿಗಳು ನಿಮ್ಮ ವ್ಯಾಪ್ತಿಯಲ್ಲಿ ಅಪಾಯ ಎನಿಸುವ ಸ್ಥಳ, ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ನೀರಿನ ಪೈಪ್​ಲೈನ್​ ಪರೀಸಿ. ಚರಂಡಿ ಸ್ವಚ್ಛಗೊಳಿಸಿ. ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ನೀರು ಬಿಡಲಾಗಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಿ. ಪ್ರವಾಹ ಆದಲ್ಲಿ ಜನರನ್ನು ಸುರತ ಸ್ಥಳಕ್ಕೆ ಸ್ಥಳಾಂತರಿಸಿ. ಗ್ರಾಮಗಳಲ್ಲಿ ನಿರಂತರ ಜಾಗೃತಿ ಮೂಡಿಸಿ. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.

ಒಣ ಬೇಸಾಯ ಪ್ರದೇಶಗಳಲ್ಲಿ ಮಳೆ ಕೊರತೆ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ವಾರವೂ ಮಳೆ ಬರದಿದ್ದರೆ ಬೆಳೆ ಹಾನಿಯಾಗಲಿದೆ. ಈ ಬಗ್ಗೆ ತಕ್ಷಣ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ತಯಾರಿ ಮಾಡಿಕೊಳ್ಳಿ. ಬೆಳೆವಿಮೆ ಮಾಡಿಸಿಕೊಳ್ಳುವಂತೆ ರೈತರಿಗೆ ತಿಳಿವಳಿಕೆ ಮೂಡಿಸಿ. ಗ್ರಾಮವಾರು ಮಾಹಿತಿ ಸಂಗ್ರಹಿಸಿ. ಜುಲೈ ತಿಂಗಳಲ್ಲಿ ಮಳೆ ಕೊರತೆಯಿಂದ ಗಂಗಾವತಿ, ಕಾರಟಗಿ ಭಾಗದಲ್ಲಿ 28.96 ಹೆಕ್ಟೇರ್​, ಕೊಪ್ಪಳ ತಾಲೂಕಿನಲ್ಲಿ 1.78 ಹೆಕ್ಟೇರ್​ ಪ್ರದೇಶ ಬೆಳೆಹಾನಿಯಾಗಿದೆ. ಈ ಬಗ್ಗೆ ವಿವರವಾದ ವರದಿ ಸಲ್ಲಿಸಿ. ತುಂಗಭದ್ರಾ ಜಲಾಶಯದಲ್ಲಿ ನೀರು ನಿರ್ವಹಣೆ ಅಚ್ಚುಕಟ್ಟಾಗಿ ಮಾಡುವಂತೆ ನಿರ್ದೇಶಿಸಿದರು.

ಡಿಸಿ ನಲಿನ್​ ಅತುಲ್​ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ನಿರ್ವಹಣೆಗೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದೇವೆ. ನದಿಪಾತ್ರದ 25 ಗ್ರಾಪಂಗಳ ಪಟ್ಟಿ ಮಾಡಿದ್ದೇವೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಗ್ರಾಪಂಗೆ ಟಾಸ್ಕ್​ೋರ್ಸ್​ ರಚಿಸಿದ್ದು ನೋಡಲ್​ ಅಧಿಕಾರಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್​. ಮಾತನಾಡಿ, ಜುಲೈನಲ್ಲಿ ಶೇ.24 ರಷ್ಟು ಮಳೆ ಕೊರತೆಯಾಗಿದೆ. ಬೆಳೆ ಹಾನಿ ಕುರಿತು ಸಮೀೆ ನಡೆಸಲಾಗುವುದು. ಸದ್ಯ 1,796.70 ಕ್ವಿಂಟಾಲ್​ ಬಿತ್ತನೆ ಬೀಜ, 55,271 ಟನ್​ ರಸಗೊಬ್ಬರ ಸಂಗ್ರಹವಿದೆ ಎಂದರು.

ಮೆಕ್ಕೆ ಜೋಳ ಬೆಳೆಯಲ್ಲಿ ಕಾಣಿಸಿಕೊಳ್ಳುವ ಜೈವಿಕ ಹುಳಗಳ ನಿರ್ವಹಣೆ ಕುರಿತು ಕೃಷಿ ಇಲಾಖೆ ಹೊರತಂದ ಪೋಸ್ಟರ್​ಗಳನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್​, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಇತರ ಅಧಿಕಾರಿಗಳಿದ್ದರು.