ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರು ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಉಪಸ್ಥಿತರಿದ್ದರು.