ಜಿಲ್ಲೆ

ಸಿದ್ಧಾರೂಢರಿಗೆ ತುಲಾಭಾರ ಸೇವೆ ನೆರವೇರಿಸಿದ ಸಚಿವ ತಂಗಡಗಿ

ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಶ್ರೀ ಸಿದ್ಧಾರೂಢರ ಹಾಗೂ ಶ್ರೀ ಗುರುನಾಥಾರೂಢರ ಗದ್ದುಗೆಗಳಿಗೆ ಬುಧವಾರ ಭೇಟಿ ನೀಡಿ ದರ್ಶನಾಶ್ರೀವಾದ ಪಡೆದರು. ನಂತರ ಶ್ರೀಗಳ ತುಲಾಭಾರ ಸೇವೆ ನೆರವೇರಿಸಿದರು.

ಶ್ರೀ ಸಿದ್ಧಾರೂಢರ 190ನೇ ಜಯಂತ್ಯುತ್ಸವ ಹಾಗೂ ಶ್ರೀ ಗುರುನಾಥಾರೂಢರ 115ನೇ ಜಯಂತ್ಯುತ್ಸವ, ಶ್ರೀ ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ ನಿಮಿತ್ತ ಹನ್ನೊಂದು ಸಾವಿರ ಕಥಾಮೃತ ಮೆರವಣಿಗೆ ಕಾರ್ಯಕ್ರಮದಲ್ಲಿ ನೂರಾರು ಕಲಾ ತಂಡಗಳು ಭಾಗವಹಿಸುತ್ತಿವೆ. ಈ ಕಲಾ ತಂಡಗಳಿಗೆ ತಮ್ಮ ಇಲಾಖೆಯಿಂದ ಗೌರವಧನದ ಅನುದಾನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸಚಿವರನ್ನು ಶ್ರೀಮಠದಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.

ಶ್ರೀಮಠದ ಟ್ರಸ್ಟ್ ಕಮಿಟಿ ಚೇರ್ಮನ್‌ಬಸವರಾಜ ಕಲ್ಯಾಣಶೆಟ್ಟರ್, ವೈಸ್-ಚೇರ್ಮನ್ ಮಂಜುನಾಥ ಮುನವಳ್ಳಿ, ಧರ್ಮದರ್ಶಿಗಳಾದ ಡಾ. ಗೋವಿಂದ ಮಣ್ಣೂರ, ಶಾಮಾನಂದ ಪೂಜೇರಿ, ಚನ್ನವೀರ ಮುಂಗುರವಾಡಿ, ರಮೇಶ ಬೆಳಗಾವಿ, ವಿನಾಯಕ ಘೋಡಕೆ, ವ್ಯವಸ್ಥಾಪಕ ಈರಣ್ಣ ತುಪ್ಪದ ಇತರರು ಇದ್ದರು.