ಜಿಲ್ಲೆ

ಕೇಸ್ ಇತ್ಯರ್ಥ ಆಗುತ್ತಿದ್ದಂತೆಯೇ ಸಂಪುಟಕ್ಕೆ ಸೇರ್ಪಡೆ: ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಉಮೇಶ್ ಕತ್ತಿ

theerthaswamy

ಮೈಸೂರು: ಕೇಸ್ ಇತ್ಯರ್ಥ ಆಗುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಸಂಪುಟ ಸೇರುವ ವಿಶ್ವಾಸ ನನಗೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಅಡಿದ ಅವರು, ರಮೇಶ್ ಅವರು ನೂರಕ್ಕೆ ನೂರರಷ್ಟು ಸಚಿವರಾಗುತ್ತಾರೆ. ಈ ಮಾತನ್ನು ನಾನೊಬ್ಬ ಸಚಿವನಾಗಿ ಹೇಳುತ್ತಿದ್ದೇನೆ. ಅವರು ಐದು ಬಾರಿ ಶಾಸಕರಾಗಿ ಕೆಲಸ ಮಾಡಿದ್ದು, ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಪಕ್ಷ ಮತ್ತು ಮುಖ್ಯಮಂತ್ರಿಗಳು ತೀರ್ಮಾನ ಮಾಡುತ್ತಾರೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ರಾಜ್ಯದಲ್ಲಿ ಪಡಿತರ ಅಕ್ಕಿ ಕಡಿತ ವಿಚಾರ:

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಪಡಿತರ ಅಕ್ಕಿ ಕಡಿತ ಮಾಡಲ್ಲ. ಆಹಾರ ಭದ್ರತಾ ಕಾಯ್ದೆ ಅಡಿ 5 ಕೆ.ಜಿ. ಅಕ್ಕಿ ನೀಡಲಾಗುತ್ತದೆ. ಉತ್ತರ ಕರ್ನಾಟಕಕ್ಕೆ 5 ಕೆ.ಜಿ. ಗೋಧಿ, ದಕ್ಷಿಣ ಕರ್ನಾಟಕಕ್ಕೆ 5 ಕೆ.ಜಿ. ಅಕ್ಕಿ ವಿತರಣೆಗೆ ಚಿಂತನೆ ನಡೆದಿದೆ ಎಂದರು.

ಅರಣ್ಯ ಭೂಮಿ ಒತ್ತುವರಿ ಆಗಿದ್ದರೆ ತಕ್ಷಣ ತೆರವು:

ಬಂಡೀಪುರ ಅಭಯಾರಣ್ಯದಲ್ಲಿ 900 ಎಕರೆ ಅರಣ್ಯ ಒತ್ತುವರಿ ಮಾಡಿದ್ದವರೇ ವಾಪಸ್ಸು ಮಾಡಿದ್ದಾರೆ. ಬೇರೆ ಬೇರೆ ಒತ್ತುವರಿ ಇರುವ ಜಾಗದಲ್ಲಿ ತೆರವು ಮಾಡಲು ಕ್ರಮ ವಹಿಸಲಾಗುವುದು ಎಂದು ಮೈಸೂರಿನಲ್ಲಿ ಸಚಿವ ಉಮೇಶ್ ಕತ್ತಿ ಹೇಳಿದರು.