ವಿಜಯವಾಣಿ ಸುದ್ದಿಜಾಲ ಕಲಬುರಗಿ
ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಕಲಬುರಗಿ ಜಿ¯್ಲÁ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಕ್ರೀಡಾಂಗಣದಲ್ಲಿ ಮೂಲಸೌಲಭ್ಯ ಒದಗಿಸಿ ಅಭಿವೃದ್ದಿಪಡಿಸುವುದರ ಜತೆಗೆ ಕ್ರೀಡಾಂಗಣದಲ್ಲಿರುವ ಹಳೆಯ ಕಟ್ಟಡ ನವೀಕರಣ ಅಥವಾ ನೆಲಸಮಗೊಳಿಸಿ ಆ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕಾ ಎನ್ನುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬಾಸ್ಕೆಟ್‌ಬಾಲ್, ಹಾಕಿ, ಈಜುಕೊಳ, ಸೆಟಲï ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಜೂಡೋ ಅಂಕಣಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್‌ಸಿAಗ್ ಮೀನಾ, ನಗರ ಪೊಲೀಸ್ ಕಮೀಷನರ್ ಆರ್.ಚೇತನ್, ಹೆಚ್ಚುವರಿ ಜಿ¯್ಲÁಧಿಕಾರಿ ರಾಯಪ್ಪ ಹುಣಸಗಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಇತರರು ಇದ್ದರು.