ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಸೆ.6ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ಕೃಷ್ಣಬೈರೇಗೌಡ ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಮಧ್ಯಾಹ್ನ12.30ರವರೆಗೆ ಸಮಯ ಕಾಯ್ದಿರಿಸಲಾಗಿದೆ. ಬಳಿಕ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2ರಿಂದ ಕಂದಾಯ ಇಲಾಖೆ ಅಽಕಾರಿಗಳ ಸಭೆ ನಡೆಸಿ ಸಂಜೆ 6ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 8.30ಕ್ಕೆ ಮೂಡಿ ಏತನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡುವರು. 9ಕ್ಕೆ ಆನವಟ್ಟಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ಪರಿಶೀಲಿಸುವರು. 11.30ಕ್ಕೆ ಶಿವಮೊಗ್ಗ ಮಲವಗೊಪ್ಪದ ಭದ್ರಾ ಕಾಡಾ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸುವರು. ಮಧ್ಯಾಹ್ನ 1ಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೊಂದಿಗೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಬಳಿಕ ಕಂದಾಯ ಇಲಾಖೆ ಅಽಕಾರಿಗಳ ಸಭೆಯಲ್ಲಿ ಭಾಗವಹಿಸುವರು.