ಜಿಲ್ಲೆ

ಸಿಲೆಂಡರ್ ಸ್ಫೋಟ: ಮೃತರ ಮನೆಗೆ ಸಚಿವರ ಭೇಟಿ

ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಿಯಾಂಕ್ ಖರ್ಗೆ ಡಾ ಶರಣಪ್ರಕಾಶ ಪಾಟೀಲ

ಕಲಬುರಗಿ.: ನಿನ್ನೆ ನಗರದ‌ ಸಪ್ತಗಿರಿ ಹೊಟೇಲ್ ನಲ್ಲಿ ನಡೆದ ಸಿಲೆಂಡರ್ ಸ್ಪೋಟದಲ್ಲಿ ಸಾವನ್ನಪ್ಪಿದ ಮಲ್ಲಿಕಾರ್ಜುನ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ‌‌ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಸಾಂತ್ವನ‌ ಹೇಳಿದರು.

ನಂತರ ನಗರದ ಜಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದರು.