ಜಿಲ್ಲೆ

ಕೊಡವ ಹೆರಿಟೇಜ್‌ಗೆ ಸಚಿವರ ಭೇಟಿ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪರವರು ಮಂಗಳವಾರ ಕೊಡವ ಹೆರಿಟೇಜ್ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು.


ಈಗಾಗಲೇ ೩ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಉಳಿದ ಕಾಮಗಾರಿ ಆಗದಿರುವ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈಗ ಆಗಿರುವ ಕಾಮಗಾರಿಗಳು ಮತ್ತು ಆಗಬೇಕಿರುವ ಕಾಮಗಾರಿ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸಚಿವರು ಸೂಚಿಸಿದರು.


ಕೊಡಗು ಜಿಲ್ಲೆಯಲ್ಲಿ ಹಲವು ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಕೆಲವು ಯೋಜನೆಗಳಿಗೆ ಹಣ ಇದ್ದರೂ ಸಹ ಪೂರ್ಣಗೊಳಿಸುತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ ಇತರರು ಇದ್ದರು.