ಜಿಲ್ಲೆ

ಅಲ್ಪ ಸಂಖ್ಯಾತರಿಗೂ ಸಚಿವ ಸ್ಥಾನ ನೀಡಲಿ

ಜಗದೀಶ ಹೊಂಬಳಿ

ಬೆಳಗಾವಿ: ಉತ್ತರ ಕರ್ನಾಟಕದವರಿಗೆ ಸಿಎಂ ಸ್ಥಾನ ಹಾಗೂ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಮೂಲಕ ತಾವು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಬೆಳಗಾವಿ ಶಾಸಕ ಆಸೀಫ್ ಸೇಠ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಹಾಗೂ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಬೇಕು. ಅಲ್ಪ ಸಂಖ್ಯಾತರ ಜನಸಂಖ್ಯೆಯನ್ನು ಆಧರಿಸಿ ಅಲ್ಪಸಂಖ್ಯಾತರಿಗೂ ಮಂತ್ರಿಮಂಡಲದಲ್ಲಿ ಹೆಚ್ಚಿನ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ ತಾವು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದರು.