ಜಿಲ್ಲೆ

ನಡುಬೀದಿಯಲ್ಲಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು : ಕಾರಣ ಕೇಳಿದ್ರೆ ಶಾಕ್​! | Karnataka

Karnataka: ನಾಲ್ವರು ವ್ಯಕ್ತಿಗಳು ಸೇರಿ 35 ವರ್ಷದ ವ್ಯಕ್ತಿಯನ್ನು ಸಾರ್ವಕನಿಕರ ಮುಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೊಪ್ಪಳ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಭಾನುವಾರ (ಜೂನ್​.1) ನಡೆದಿದೆ.

ಚನ್ನಪ್ಪ ಹುಸೇನಪ್ಪ ನರಿನಾಳ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಸಾರ್ವಜನಿಕರ ಮುಂದೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಪಕ್ಕದಲ್ಲಿದ್ದ ಜನರು ನೋಡುತ್ತಿದ್ದರೂ ಯಾರೂ ಅವನ ಸಹಾಯಕ್ಕೆ ಬರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೆಯ ದ್ವೇಷ ಮತ್ತು ಆಸ್ತಿ ವಿವಾದ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತರ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ. (ಏಜೆನ್ಸೀಸ್​)