ನಂಜನಗೂಡು: ನಂಜನಗೂಡಿನ ತಾಂಡವಪುರದಲ್ಲಿರುವ ಮಹಾರಾಜ ತಾಂತ್ರಿಕ ಕಾಲೇಜು ಮೈಸೂರಿನಲ್ಲಿರುವ ಎರಡನೇ ತಾಂತ್ರಿಕ ಕಾಲೇಜು ಎಂಬ ಹೆಗ್ಗಳಿಕೆ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ವೈ.ಟಿ. ಕೃಷ್ಣೇಗೌಡ ತಿಳಿಸಿದರು.
ತಾಲೂಕಿನ ತಾಂಡವಪುರದಲ್ಲಿರುವ ಮಹಾರಾಜ ತಾಂತ್ರಿಕ ವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಒಂದು ದಿನದ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಕಾಲೇಜು ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮೂಲಕ ತಾಂತ್ರಿಕ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುವುದನ್ನು ಮುಖ್ಯ ಧ್ಯೇಯವಾಗಿಸಿಕೊಂಡಿದೆ ಎಂದರು.
ದಿ ಕಾನ್ಸೆಪ್ಟ್ ಪ್ರಾಬ್ಲಮ್ ವಿತ್ ಪೈಥಾನ್ ಎಂಬ ವಿಷಯದ ಬಗ್ಗೆ ಟೆಕ್ಸಸ್ ವಿಶ್ವವಿದ್ಯಾಲಯದ ಡಾ.ಜಯ ಕೇಶವನ್ ವೀರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿಕೊಟ್ಟರು.
ಮಹಾರಾಜ ಎಜುಕೇಶನ್ ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಎಚ್.ಕೆ. ಚೇತನ್, ಡಾ.ಕೆ.ಸ್ವರ್ಣಲತಾ, ಡಾ.ಭಸಂತ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಇದ್ದರು.