ಜಿಲ್ಲೆ

ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಅಂತ್ಯಕ್ರಿಯೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಗುರುವಾರ ನಿಧನರಾದ ಜಿಲ್ಲೆಯ ಹಿರಿಯ ರಾಜಕಾರಣಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ (83) ಅವರ ಅಂತ್ಯಸAಸ್ಕಾರವನ್ನು ಶುಕ್ರವಾರ ಮಡಿಕೇರಿಯ ಕೊಡವ ಸಮಾಜ ರುದ್ರಭೂಮಿಯಲ್ಲಿ ಕೊಡವ ಸಂಪ್ರದಾಯದAತೆ ನೆರವೇರಿಸಲಾಯಿತು.

ಇದಕ್ಕೂ ಮೊದಲು ಮಿಟ್ಟು ಚಂಗಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಗಾಂಧಿ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಇಂಧನ ಸಚಿವ ಕೆ.ಜೆ. ಜಾರ್ಜ್, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಅರಕಲಗೂಡು ಶಾಸಕ ಎ. ಮಂಜು, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್, ಹೆಚ್. ವಿಶ್ವನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕಾಫಿ ಬೆಳೆಗಾರ ವಿನೋದ್ ಶಿವಪ್ಪ, ಕೆಪಿಸಿಸಿ ವಕ್ತಾರ ಚಂದ್ರಮೌಳಿ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಸೇರಿದಂತೆ ಗಣ್ಯರು ಮಿಟ್ಟು ಚಂಗಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಮಿಟ್ಟು ಚಂಗಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್,

ನನ್ನ ರಾಜಕೀಯ ಜೀವನ ಶುರು ಮಾಡಿದಾಗಿನಿಂದ ಒಳ್ಳೆಯ ಹಿತೈಷಿ ಆಗಿದ್ದರು. ಮೊನ್ನೆಯಷ್ಟೇ ಅವರು ನನ್ನನ್ನು ಅವರ ರೆಸಾರ್ಟ್ಗೆ ಕರೆದೊಯ್ದಿದ್ದರು. ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದರು ಎಂದು ನೆನಪಿಸಿಕೊಂಡರು.