ಜಿಲ್ಲೆ

ನೈತಿಕ ಪೊಲೀಸ್‌ಗಿರಿಗೆ ತಡೆಗೆ ಶಾಸಕರ ಸೂಚನೆ

Mangaluru - Nishantha Narayana

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ, ಯುವತಿಯ ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್‌ಗಿರಿ ನಡೆದಿದೆ ಎಂಬ ವಿಚಾರ ಗಮನಕ್ಕೆ ಬಂದಿದ್ದು, ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ. ಇಂಥವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ವಿಹಾರಕ್ಕೆ ಬರುವ ಮಂದಿಗೆ ರಕ್ಷಣೆ ನೀಡುವ ಕೆಲಸ ಪೊಲೀಸರು ಮಾಡಲಿದ್ದಾರೆ. ಬಿರುಮಲೆ ಬೆಟ್ಟದಲ್ಲಿ ಪೊಲೀಸ್ ರಕ್ಷಣೆಗೆ ಸೂಚನೆ ನೀಡಿದ್ದು, ಮಾತ್ರವಲ್ಲದೆ ಇನ್ನು ಮುಂದೆ ಈ ರೀತಿಯ ನೈತಿಕ ಪೊಲೀಸ್‌ಗಿರಿ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿರುವುದಾಗಿ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.