ಜಿಲ್ಲೆ

ನೈತಿಕ ಪೊಲೀಸ್‌ಗಿರಿಗೆ ಆಸ್ಪದ ನೀಡುವುದಿಲ್ಲ, ಶಾಸಕ ಆಸೀಫ್ ಶೇಠ್

ಜಗದೀಶ ಹೊಂಬಳಿ

ಬೆಳಗಾವಿ: ನಗರದಲ್ಲಿ ನೈತಿಕ ಪೊಲೀಸ್‌ಗಿರಿಗೆ ಆಸ್ಪದ ನೀಡುವುದಿಲ್ಲ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಆಸೀಫ್ ಸೇಠ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಿದೆ ಎನ್ನುವುದು ನಮಗೆ ಮಾಹಿತಿಯಿಲ್ಲ , ನೈತಿಕ ಪೊಲೀಸ್ ಗಿರಿಗೆ ಜಿಲ್ಲೆಯಲ್ಲಿ ಅವಕಾಶವಿಲ್ಲ. ಯಾರೇ ಭಾಗಿಯಾಗಿದ್ದರು ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂದರು.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ಮಾಡಿಕೊಳ್ಳುತ್ತಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಪಕ್ಷದಲ್ಲಿ ಬಹಳಷ್ಟು ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರು ಅವರ ಪರವಾಗಿ ಕೆಲಸ ಮಾಡುತ್ತೇವೆ, ಪ್ರಕಾಶ ಹುಕ್ಕೇರಿ ನಮ್ಮ ಪಕ್ಷದ ಹಿರಿಯ ನಾಯಕರಿದ್ದಾರೆ. ಹೈಕಮಾಂಡ್ ಅವರಿಗೆ ಟಿಕೆಟ್ ಕೊಡುತ್ತದೆ ಎಂಬುದನ್ನು ಕಾದು ನೋಡಬೇಕು. ರಮೇಶ್ ಕತ್ತಿ ಕಾಂಗ್ರೆಸ್ ಸೇರುವುದರ ಬಗ್ಗೆ ಗೊತ್ತಿಲ್ಲ. ಅದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಹೋದವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.