ಜಿಲ್ಲೆ

ಕಳಪೆ ಕಾಮಗಾರಿ ಸಹಿಸಲ್ಲ

Davangere - Desk - Shobha Krishna Gowda

ಮಾಯಕೊಂಡ: ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳು ಕಳಪೆಯಾದರೆ ಸಹಿಸುವುದಿಲ್ಲ ಎಂದು ಗುತ್ತಿಗೆದಾರರು ಹಾಗೂ ಇಂಜಿನಿಯರ್​ಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಎಚ್ಚರಿಕೆ ನೀಡಿದರು.

ದಾವಣಗೆರೆ ತಾಲೂಕು ಅತ್ತಿಗೆರೆ ಗ್ರಾಪಂ ವ್ಯಾಪ್ತಿಯ ಕಳವೂರು ಗ್ರಾಮದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಿದ್ದ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

2024-25ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳವೂರು ಗ್ರಾಮದ ವಿವಿಧ ಕಾಲನಿಗಳಲ್ಲಿ ಸಿಸಿ ಚರಂಡಿ, ಸಿಸಿ ರಸ್ತೆ ಹಾಗೂ ಡಕ್​ಗಳ ನಿರ್ಮಾಣ ಸೇರಿ ಎಲ್ಲ ಕಾಮಗಾರಿಗಳಿಗೆ 70 ಲಕ್ಷ ರೂ. ಅನುದಾನ ನೀಡಲಾಗಿದೆ. ಉತ್ತಮ ಕೆಲಸ ಆಗಬೇಕು ಎಂದು ತಿಳಿಸಿದರು.

ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಅತ್ತಿಗೆರೆ ಗ್ರಾಪಂ ಅಧ್ಯಕ್ಷ ಕೆ.ಒ. ಮಹೇಶ್, ಆರ್​ಡಿಪಿಆರ್ ಎಇಇ ಶಿವಮೂರ್ತಿ, ಕಿರಿಯ ಇಂಜಿನಿಯರ್ ರಾಜೀವ್, ಪಿಡಿಒ ಶೈಲಜಾ, ಕಾರ್ಯದರ್ಶಿ ಸಿದ್ದೇಗೌಡ, ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಗ್ರಾಪಂ ಸದಸ್ಯರಾದ ವಿಜಯಕುಮಾರ್, ಕೋಟೆಪ್ಪ, ಪಾರ್ವತಮ್ಮ, ಬಸವರಾಜ್, ಶ್ರೀನಿವಾಸ್, ಮಂಜಣ್ಣ, ರಂಗಪ್ಪ ಇತರರಿದ್ದರು.