ಯಲಬುರ್ಗಾದಲ್ಲಿ ಶಾಸಕರ ಕಚೇರಿ ಉದ್ಘಾಟನೆಯಲ್ಲಿ ಎಂಎಲ್‌ಎ ಬಸವರಾಜ ರಾಯರಡ್ಡಿ, ತಾಪಂ ಇಒ ಸಂತೋಷ ಪಾಟೀಲ್, ಪ್ರಮುಖರಾದ ಯಂಕಣ್ಣ ಯರಾಶಿ, ವೀರನಗೌಡ ಬಳೂಟಗಿ, ರೇವಣಪ್ಪ ಸಂಗಟಿ, ಶರಣಪ್ಪ ಗಾಂಜಿ ಇದ್ದರು. 
ಜಿಲ್ಲೆ

ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು

ಯಲಬುರ್ಗಾ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಪಟ್ಟಣದ ಕಂದಾಯ ಭವನದ ಕೆಳಮಹಡಿಯಲ್ಲಿ ಶಾಸಕರ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಕೆಲಸ ಆರಂಭ

ತಾಲೂಕಿನ ಜನ ವಿಶ್ವಾಸವಿಟ್ಟು ಗೆಲ್ಲಿಸಿದ್ದಾರೆ. ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸ ಮಾಡಲಾಗುವುದು. ಗ್ರಾಮಗಳ ಅಭಿವೃದ್ಧಿ, ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕ್ಷೇತ್ರದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಕೆಲಸ ಆರಂಭಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ್, ಪ್ರಮುಖರಾದ ಯಂಕಣ್ಣ ಯರಾಶಿ, ವೀರನಗೌಡ ಬಳೂಟಗಿ, ರೇವಣಪ್ಪ ಸಂಗಟಿ, ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ಮಲ್ಲು ಜಕ್ಕಲಿ, ರೇವಣಪ್ಪ ಹಿರೇಕುರುಬರ, ಶರಣಗೌಡ ಬಸಾಪುರ, ನಿಂಗಪ್ಪ ಕಮತರ, ಪುನೀತ ಕೊಪ್ಪಳ ಇತರರಿದ್ದರು.