ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ತಾಲೂಕು ಕಚೇರಿ ಆವರಣದಲ್ಲಿ ಸ್ವಚ್ಛತೆಯಲ್ಲಿ ತೊಡಗಿರುವ ಶಾಸಕ ಎಚ್.ಕೆ.ಸುರೇಶ್, ತಹಸೀಲ್ದಾರ್ ಎಂ.ಮಮತಾ ಮತ್ತು ಸಿಬ್ಬಂದಿ. 
ಜಿಲ್ಲೆ

ಸ್ವಚ್ಛತಾ ಕಾರ್ಯಕ್ಕೆ ಶಾಸಕ ಚಾಲನೆ

ರವಿಕುಮಾರ್ ಪಿ. ಕೆ

ಬೇಲೂರು: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಪಟ್ಟಣದ ತಾಲೂಕು ಕಚೇರಿ ಆವರಣವನ್ನು ತಹಸೀಲ್ದಾರ್ ಎಂ.ಮಮತಾ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ಪುರಸಭೆ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಶಾಸಕ ಎಚ್.ಕೆ.ಸುರೇಶ್ ಸೋಮವಾರ ಚಾಲನೆ ನೀಡಿದರು.

ತಹಸೀಲ್ದಾರ್ ಎಂ.ಮಮತಾ ತಮ್ಮ ಕಚೇರಿಯ ಎಲ್ಲ ಸಿಬ್ಬಂದಿಯೊಂದಿಗೆ ಸೇರಿ ಕಚೇರಿ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದ್ದು ವಿಶೇಷವಾಗಿತ್ತು.