ಜಿಲ್ಲೆ

ಸ್ಥಗಿತಗೊಂಡಿದ್ದ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಚಾಲನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 82 ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ ಕೆಲಸ ನಡೆಯುತ್ತಿದೆ. ಅಂತೆಯೇ ಐದು ಕೊಠಡಿಗಳ ನಿರ್ಮಾಣವಾಗಲಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ಕಾರಣಾಂತರದಿಂದ ಸ್ಥಗಿತವಾಗಿದ್ದ ಸರ್ಕಾರಿ ಶಾಲಾ ಕಟ್ಟಡವನ್ನು ತ್ವರಿತವಾಗಿ ಕೆಲಸ ಆರಂಭಿಸುವಂತೆ ಚಾಲನೆ ನೀಡಿದ್ದೇನೆ. ಪಸ್ತುತ ಶಾಲೆಯಲ್ಲಿ 108 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶೈಕ್ಷಣಿಕ ಅಭಿವೃದ್ಧಿಗೆ ತೊಡಕಾಗದಂತೆ ಶೀಘ್ರವಾಗಿ ಕೆಲಸ ಆರಂಭಿಸುವಂತೆ ಸೂಚಿಸಿಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಶ್ರೀಧರ್, ಮಂಜುನಾಥ್, ಪ್ರಸನ್ನಚಾರಿ, ಮಹದೇವಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ಅಶೋಕ್ ಪಟೇಲ್ ಇತರರಿದ್ದರು.