ಜಿಲ್ಲೆ

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಜಿ ಐಆರ್‌ಎಸ್ ಅಧಿಕಾರಿ ನಿಲುವಿದು...!

reportermys

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ ಎಂದು ಮಾಜಿ ಐಆರ್‌ಎಸ್ ಅಧಿಕಾರಿ ಲಕ್ಷ್ಮೀಅಶ್ವಿನ್‌ಗೌಡ ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ಪಕ್ಷದ ಪರ ಗುರುತಿಸಿಕೊಂಡಿದ್ದೆ. ಆದರೆ, ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಪಕ್ಷದ ವರಿಷ್ಠರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದಲ್ಲಿ ಸಾಮಾನ್ಯ ಕಾರ್ಯಕರ್ತಳಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಪಪಡಿಸಿದರು.
ಇನ್ನು ತಮ್ಮ ಅಂಜನಿ ಫೌಂಡೇಷನ್ ಸಹಯೋಗದಲ್ಲಿ ಆ.29ರಂದು ಮಂಡ್ಯ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 140 ಕಂಪನಿಗಳು ಭಾಗವಹಿಸಲಿದ್ದು, ಸುಮಾರು 5 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಇದಲ್ಲದೆ ಯುವಕರಿಗೆ ಮತ್ತು ಯುವತಿಯರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸಲು ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.