ಮುದಗಲ್ ಅಂಬೇಡ್ಕರ್ ವೃತ್ತದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ ಖಾಜಿ, ಜಿಲ್ಲಾ ಸಮಿತಿ ಸದಸ್ಯರಾದ ಖಾಸಿಂ ಡೊಯಿ, ಅಹ್ಮದ್ ರಜಾ ಖಾಜಿ, ಪ್ರಮುಖರಾದ ಫಾರುಕ್ ಬೇಗ್, ದಾವುದ್, ಮೆಹಬೂಬ್ ಬೆಳ್ಳಿಕಟ್, ಜಾವೀದ್ ಇತರರಿದ್ದರು. 
ಜಿಲ್ಲೆ

ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ

ಮುದಗಲ್: ಮುಸ್ಲಿಮರಿಗೆ ಜಮೀನು ನೀಡಿದರೆ ಅಧಿಕಾರಿಯನ್ನು ನೇಣಿಗೇರಿಸುತ್ತೇನೆ ಎಂದು ಹೇಳಿದ ಕಾಂಗ್ರೆಸ್ ಶಾಸಕ ರಮೇಶ ಬಂಡಿ ಸಿದ್ದೇಗೌಡ ಅವರನ್ನು ರಾಜ್ಯ ಸರ್ಕಾರ ವಜಾ ಮಾಡಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ ಖಾಜಿ ಮಾತನಾಡಿ, ಮುಸ್ಲಿಮರು ಸರ್ಕಾರಿ ಜಾಗದಲ್ಲಿ ತಲೆತಲಾಂತರದಿಂದ ಉಳುಮೆ ಮಾಡಿ ಕೃಷಿ ಮಾಡುತ್ತಿರುವ ರೈತರು ತಮಗೆ ಸರ್ಕಾರಿ ಜಮೀನನ್ನು ಮಂಜೂರು ಮಾಡಲು ಕೇಳಿ ಬಗರ್‌ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ವಿಚಾರವನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ಗರಂ ಆದ ಶ್ರೀರಂಗಪಟ್ಟಣ ಶಾಸಕ ಬಂಡಿ ಸಿದ್ದೇಗೌಡ ಒಂದು ಸಮುದಾಯವನ್ನು ಗುರಿಯಾಗಿಸಿ ಮಾತನಾಡಿದ್ದಾರೆ.

ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದು ಸರಿಯಲ್ಲ. ಈ ಹಿಂದೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಸಂದರ್ಭದಲ್ಲಿ ಇಡೀ ಸರ್ಕಾರವೇ ಬ್ರಾಹ್ಮಣಸಮುದಾಯದ ಪರವಾಗಿ ನಿಂತು ಸಂತ್ರಸ್ತನಿಗೆ ನ್ಯಾಯ ನೀಡಲು ಮುಂದಾಗಿತ್ತು. ಮುಖ್ಯಮಂತ್ರಿ, ಸಚಿವರು ಮೌನವಹಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.