ಮಾನ್ವಿಯಲ್ಲಿ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಜಾಥಾಕ್ಕೆ ಚಾಲನೆ ನೀಡಿ ಶಾಸಕ ಹಂಪಯ್ಯನಾಯಕ ಮಾತನಾಡಿದರು. ಒಕ್ಕೂಟದ ತಾಲೂಕು ಅಧ್ಯಕ್ಷ ಎಚ್.ಶಫುದ್ದೀನ್ ಪೋತ್ನಾಳ, ಪ್ರಧಾನ ಕಾರ್ಯದರ್ಶಿ ರಾಜು ತಾಳಿಕೋಟೆ, ಜಿಲ್ಲಾಧ್ಯಕ್ಷ ಬಸವರಾಜ ಸಿರವಾರ, ಗುತ್ತಿಗೆದಾರ ಸೈಯದ್ ಅಕ್ಬರ್ ಸಾಬ್, ಡಾ.ರೋಹಿಣಿ ಮಾನ್ವಿಕರ್ ಇತರರಿದ್ದರು. 
ಜಿಲ್ಲೆ

ಕನ್ನಡಿಗರು ಮಾತೃಭಾಷೆಯಲ್ಲಿ ಮಾತನಾಡಲಿ

ಮಾನ್ವಿ: ಭಾಷೆ, ನೆಲ, ಜಲ ಮತ್ತು ಸಂಸ್ಕೃತಿ ಮೂಲಕ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕನ್ನಡ ನಾಡಿನ ಕಂಪು ಹರಿಸಬೇಕು ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕನ್ನಡ ನಾಡಿನ ಕಂಪು ಹರಿಸಲಿ

ಸುವರ್ಣ ಕರ್ನಾಟಕ ಸಂಭ್ರಮದ ನಿಮಿತ್ತ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಿದ್ದ ಕನ್ನಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಿರುವುದು ಸಂತೋಷ ತಂದಿದೆ. ಕನ್ನಡಿಗರು ಬೇರೆ ಭಾಷೆ ಮಾತನಾಡಲು ಮುಂದಾಗುವುದು ಸರಿಯಲ್ಲ ಎಂದು ತಿಳಿಸಿದರು.

ಕಸಾಪ ಜಿಲ್ಲಾ ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರು, ತಾಲೂಕು ಅಧ್ಯಕ್ಷ ರವಿಕುಮಾರ ಪಾಟೀಲ್, ಶಿಕ್ಷಕರ ಸಂಘದ ಸುರೇಶ ಕುರ್ಡಿ, ಹಂಪಣ್ಣ ಚಂಡೂರು, ಮೂಕಪ್ಪ ಕಟ್ಟಿಮನಿ, ಬಿ.ವಿ.ರಡ್ಡಿ, ಕೆ.ಇ.ನರಸಿಂಹ, ಪ್ರಕಾಶ ಪಾಟೀಲ್, ಅನೀಲ್ ಕುಮಾರ, ಪ್ರಕಾಶ, ಮುಖೀಮ್, ವೀರಭದ್ರಗೌಡ ಇತರರು ಇದ್ದರು.