ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕ ಜಯರಾಮಯ್ಯ ಡಿ.ಕೆ. ಇದ್ದರು. 
ಜಿಲ್ಲೆ

ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗಲಿ

ಸಿಂಧನೂರು: ಕ್ರೀಡೆಯಿಂದ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಯುವ ಸಮೂಹ ಪಠ್ಯದೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಲಿ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಯಚೂರು, ಅನಿಕೇತನ ಪದವಿ ಪೂರ್ವ ಕಾಲೇಜು ಸಿಂಧನೂರು ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾಪಟುಗಳಿಗೆ ಸಮಾಜದಲ್ಲಿ ದೊಡ್ಡ ಗೌರವವಿದೆ. ಅಲ್ಲದೆ ಸ್ಥಾನಮಾನಗಳು ಸಿಗುತ್ತವೆ. ಕ್ರೀಡೆಯಿಂದ ಏಕಾಗ್ರತೆ, ಶಿಸ್ತು, ಸಂಸ್ಕಾರ ಗುಣಗಳು ಕಲಿತುಕೊಳ್ಳಬಹುದು. ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಸಿಂಧನೂರಿನ ಜೂನಿಯರ್ ಕಾಲೇಜು ಮೈದಾನದ ಅಭಿವೃದ್ಧಿಗೂ ಸರ್ಕಾರದಿಂದ ಅನುದಾನ ಒದಗಿಸಲಾಗಿದೆ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ದೇಸಿ ಕ್ರೀಡೆಗಳಿಗೂ ಆದ್ಯತೆ ಸಿಗಬೇಕಿದೆ. ವಿವಿಧ ಆಟಗಳ ಜತೆಗೆ ದೇಸಿ ಕ್ರೀಡೆಗಳನ್ನು ಆಯೋಜಿಸುವ ಕೆಲಸ ಶಿಕ್ಷಣ ಇಲಾಖೆ ಮಾಡಬೇಕು ಎಂದರು. ಮಾಜಿ ಸಚಿವ ಹಾಗೂ ಕೆಎಫ್‌ಒ ಅಧ್ಯಕ್ಷ ವೆಂಕಟರಾವ್ ನಾಡಗೌಡ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕ ಜಯರಾಮಯ್ಯ ಡಿ.ಕೆ., ಅನಿಕೇತನ ಕಾಲೇಜು ಅಧ್ಯಕ್ಷ ಡಿ.ಎಚ್.ಕಂಬಳಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಸೋಮಶೇಖರಪ್ಪ ಹೊಕ್ರಾಣಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ್, ಪಾಟೀಲ್ ಕಾಲೇಜು ಕಾರ್ಯದರ್ಶಿ ಆರ್.ಸಿ.ಪಾಟೀಲ್, ತಾಪಂ ಇಒ ಚಂದ್ರಶೇಖರ, ಬಾಲಕರ ಸರ್ಕಾರಿ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಎಸ್.ಶಿವರಾಜ್, ಅನಿಕೇತನ ಪ.ಪೂ ಕಾಲೇಜು ಪ್ರಾಚಾರ್ಯ ನಾಗರಾಜ ಮುಕ್ಕುಂದಾ, ಪದವಿ ಕಾಲೇಜು ಪ್ರಾಚಾರ್ಯ ತಿಮ್ಮಣ್ಣ ರಾಮತ್ನಾಳ ಇತರರಿದ್ದರು.