ಬೆಳಗಾವಿ: ಪ್ಲಾಸ್ಟಿಕ್ ಮುಕ್ತ ಗ್ರಾಮ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿ, ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿ ಮತ್ತು ಒಣ ಕಸ ಎಂದು ವಿಂಗಡಿಸಿ ಸಹಕರಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಯರಗಟ್ಟಿ ತಾಲೂಕಿನ ಆಲದಕಟ್ಟಿ ಕೆ.ಎಂ ಗ್ರಾಮದಲ್ಲಿ ಅತ್ಯಾಧುನಿಕ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಉಪಕರಣಗಳನ್ನು ಅನಾವರಣಗೊಳಿಸಿ ಮಾತನಾಡಿದ ಅವರು,ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಘನ ತ್ಯಾಜ್ಯ ನಿರ್ವಹಣಾ ಘಟಕದ ಅಡಿಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಮುಂದಿನ ದಿನಗಳಲ್ಲಿ ಆಲದಕಟ್ಟಿ ಕೆ.ಎಂ. ಗ್ರಾಮವು ರಾಜ್ಯಕ್ಕೆ ಮಾದರಿಯಾದ ಸ್ವಚ್ಛ ಮತ್ತು ಸುಂದರ ಗ್ರಾಮ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮವನ್ನು ಸ್ವಚ್ಛವಾಗಿಡುವ ಹಾಗೂ ಪರಿಸರ ಸಂರಕ್ಷಿಸುವ ಮಹತ್ವದ ಉದ್ದೇಶವಾಗಿದೆ.ಈ ಉಪಕರಣಗಳು ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ಸಮುದಾಯದ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿವೆ ಎಂದರು
ಸವದತ್ತಿ ತಾಪಂ ಇಒ ಆನಂದ ಬಡಕುಂದ್ರಿ, ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ,ಸದಸ್ಯರು, ಅಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.