ಬೆಳಗಾವಿ: ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಇಬ್ಬರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಬ್ಬರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಾಗಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಸರಕಾರಿ ಸರಸ್ವತಿ ಪದವಿಪೂರ್ವ ವಿದ್ಯಾಲಯದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ರಾಜ್ಯದಲ್ಲಿಯೇ ಒಬ್ಬರಾಗಿ ಇದೇ ವಿದ್ಯಾಲಯದ ಉಪನ್ಯಾಸಕರಾದ ಅನುಸೂಯಾ ಹಿರೇಮಠ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿ.
ಪ್ರಧಾನ ಮಂತ್ರಿಗಳ ಹಲವು ಅಭಿವೃದ್ದಿ ಮತ್ತು ಜನಪರ ಕಾರ್ಯಕ್ರಮಗಳಲ್ಲಿ ಒಂದಾಗಿರುವ
ಮೇರಿ ಮಾಠಿ-ಮೇರಾ ದೇಶ ಎಂಬ ವಿಶಿಷ್ಟ ಪ್ರಕಲ್ಪದಲ್ಲಿ ಅಮೃತವಾಟಿಕಾದ ನಿರ್ಮಾಣ, ಎನ್.ಎಸ್.ಎಸ್. ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಈ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಕ್ರೀಯವಾಗಿ ಭಾಗವಹಿಸಿ ವಿಶೇಷ
ಸಾಧನೆಗೈದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.