ಮದ್ದೂರು ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಶಾಸಕ ಕೆ.ಎಂ.ಉದಯ ಭೇಟಿ ನೀಡಿ ಚಾಲ್ತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಕೋಕಿಲಾ ಅರುಣ್, ಸಿದ್ದರಾಜು, ಮೀನಾಕ್ಷಿ ಇದ್ದರು.  
ಜಿಲ್ಲೆ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ

ಶಿವಶಂಕರ್ ಎಂ. ಹೆಬ್ಬಳ್ಳ

ಮದ್ದೂರು: ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ಬುಧವಾರ ಭೇಟಿ ನೀಡಿದ ಶಾಸಕ ಕೆ.ಎಂ.ಉದಯ್ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಲೀಲಾವತಿ ಬಡಾವಣೆ, ರಾಂ ರಹೀಂ ನಗರ, ಚನ್ನೇಗೌಡ ಬಡಾವಣೆ ಇನ್ನಿತರ ಕಡೆ ಪ್ರಗತಿಯಲ್ಲಿರುವ ನಗರೋತ್ಥಾನ ಯೋಜನೆಯ ಅನುದಾನದ ಮಳೆನೀರು ಚರಂಡಿ, ಕಾಂಕ್ರೀಟ್ ರಸ್ತೆ, ಡೆಕ್‌ಗಳು (ಕಿರು ಸೇತುವೆಗಳು) ಸೇರಿದಂತೆ ಇನ್ನಿತರ ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟವನ್ನು ಅಧಿಕಾರಿಗಳೊಂದಿಗೆ ಖುದ್ದು ಪರಿಶೀಲಿಸಿದರು.

ಕೆಲವು ಸ್ಥಳಗಳಲ್ಲಿ ಸಾರ್ವಜನಿಕರಿಂದ ಅತಿಕ್ರಮವಾಗಿರುವ ಸಾರ್ವಜನಿಕ ಸ್ಥಳವನ್ನು ಕಟ್ಟುನಿಟ್ಟಾಗಿ ತೆರವುಗೊಳಿಸುವ ಜತೆಗೆ ಸ್ಥಳೀಯರ ಅನುಕೂಲದ ಹಿತದೃಷ್ಟಿಯಿಂದ ಕ್ರಮ ವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಲ್ತಿಯಲ್ಲಿರುವ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಗುತ್ತಿಗೆದಾರರು ಕ್ರಮವಹಿಸುವಂತೆ ಸಂಬಂಧಿಸಿದ ಕಾಮಗಾರಿಗಳ ಗುಣಮಟ್ಟದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಜತೆಗೆ ಮೇಲುಸ್ತುವಾರಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಸಾರ್ವಜನಿಕ ದೂರುಗಳು ಬಂದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು.

ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದರಾಜು, ಮುಖ್ಯಾಧಿಕಾರಿ ಮೀನಾಕ್ಷಿ, ಮಾಜಿ ಸದಸ್ಯ ಮರಿದೇವರು, ಟಿಎಪಿಸಿಎಂಎಸ್ ನಿರ್ದೇಶಕ ಚಂದ್ರನಾಯಕ್ ಇದ್ದರು.