ಜಿಲ್ಲೆ

ಶಾಸಕರಿಂದ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲನೆ

ಇಂದಿರಾ ಎನ್ ಕೆ

ಕುಂದಾಪುರ: ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋರಾಡಿಯಲ್ಲಿ ಅಮೃತ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಸ್ಥಳಕ್ಕೆ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಯೋಜನೆಯಿಂದ ಪರಿಸರದ ಜನರಿಗೆ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಮಸ್ಯೆ ಪರಿಹರಿಸಲು ಸೂಚಿಸಿದರು. ಭೂಸ್ವಾಧೀನ ನಂತರ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಾಲೋಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಹಾಲಾಡಿ ಗ್ರಾಪಂ ಅಧ್ಯಕ್ಷ ಅಶೋಕ ಶೆಟ್ಟಿ, ಸದಸ್ಯರಾದ ಗುರುಪ್ರಸಾದ ಶೆಟ್ಟಿ, ಜನಾರ್ದನ, ಜಾನಕಿ, ಪಿಡಿಒ ವಸಂತ ಕುಮಾರ್ ಉಪಸ್ಥಿತರಿದ್ದರು.