ದೇವದುರ್ಗದ ಇಂದಿರಾ ನಗರದಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಗೆ ಶಾಸಕ ಕೆ.ಶಿವನಗೌಡ ನಾಯಕ ಟಾಸ್ ಮಾಡುವ ಮೂಲಕ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಪಾಟೀಲ್, ಮುಖಂಡರಾದ ಶರಣಗೌಡ ಕೊರವಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಜಹೀರ್‌ಪಾಷಾ, ರಮೇಶ, ಶಿವು, ಬಸವರಾಜ ಇತರರಿದ್ದರು. 
ಜಿಲ್ಲೆ

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಸಿಗಲಿ: ಶಾಸಕ ಕೆ.ಶಿವನಗೌಡ ನಾಯಕ ಸಲಹೆ

ದೇವದುರ್ಗ: ಗ್ರಾಮೀಣ ಭಾಗದ ಕ್ರೀಡೆಗಳಿಗೆ ಪ್ರೋತ್ಸಾಹವಿಲ್ಲದೇ ಕಣ್ಮರೆಯಾಗುತ್ತಿವೆ. ಹಾಗಾಗಿ ಕ್ರೀಡೆಗಳ ಉಳುವಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.


ಹೋಳಿ ಹಬ್ಬದ ನಿಮಿತ್ತ ಪಟ್ಟಣದ ಇಂದಿರಾ ನಗರದಲ್ಲಿ ಏಕಲವ್ಯ ಕಬಡ್ಡಿ ಒಕ್ಕೂಟ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು.
ಬದುಕಿನ ಜಂಜಾಟದಲ್ಲಿ ಕ್ರೀಡೆಗೆ ಸಮಯ ನೀಡಬೇಕಾಗಿದೆ. ಇದರಿಂದ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ. ಪ್ರತಿಯೊಬ್ಬರೂ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದರು.


ಭಾರತ ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡುತ್ತಿದೆ. ಓಲಂಪಿಕ್, ಕಾಮನ್‌ವೆಲ್ತ್ ಸೇರಿ ವಿವಿಧ ಕ್ರೀಡೆಯಲ್ಲಿ ದೇಶದ ಪ್ರದರ್ಶನ ಆಶಾದಾಯಕವಾಗಿದೆ. ಕೇಂದ್ರ ಸರ್ಕಾರ ಕೂಡ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಪಾಟೀಲ್, ಮುಖಂಡರಾದ ಶರಣಗೌಡ ಕೊರವಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಜಹೀರ್‌ಪಾಷಾ, ರಮೇಶ, ಶಿವು, ಬಸವರಾಜ ಇತರರಿದ್ದರು