ಜಿಲ್ಲೆ

ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ: ಶಾಸಕ ವೇದವ್ಯಾಸ ಕಾಮತ್ ಟೀಕೆ

Mangaluru - Hariprasad Rai



ಮಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ನಿರಂತರವಾಗಿ ಬೆಲೆ ಏರಿಕೆಯ ಗ್ಯಾರಂಟಿ ನೀಡಿದ್ದರ ಪರಿಣಾಮವಾಗಿ ರಾಜ್ಯದ ಜನರು ಹೈರಾಣಾಗಿದ್ದಾರೆ. ಈಗ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಸಿ ಜನತೆಯನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಹಾಲು, ವಿದ್ಯುತ್, ಸಾರಿಗೆ ದರ, ಜಿಸ್ಟ್ರೇಷನ್, ಸ್ಟಾೃಂಪ್ ಡ್ಯೂಟಿ, ತಾಂತ್ರಿಕ ಶಿಕ್ಷಣ ಶುಲ್ಕ, ವಾಹನ ನೋಂದಣಿ, ಅಬಕಾರಿ ಸುಂಕ ಸಹಿತ ಎಲ್ಲ ದರ ಏರಿಕೆಯಿಂದ ಕಂಗಲಾಗಿದ್ದ ಜನಸಾಮಾನ್ಯರಿಗೆ ಇದು ಬಹುದೊಡ್ಡ ಹೊಡೆತವಾಗಿದೆ. ಮುಂದಿನ ದಿನಗಳಲ್ಲಿ ಸರಕು ಸಾಗಾಣಿಕೆ ದರ ಇನ್ನೂ ಹೆಚ್ಚಳವಾಗಿ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಲಿದೆ . ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ
ದಿವಾಳಿಯಾಗಿದ್ದು ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಒಂದೇ ಒಂದು ರೂಪಾಯಿ ಬಿಡುಗಡೆಯಾಗುತ್ತಿಲ್ಲ. ಮುಖ್ಯಮಂತ್ರಿಗಳು ಮಾತ್ರ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ ಎಂದು ಪದೇ ಪದೇ ಜನತೆಯ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಜನಸಾಮಾನ್ಯರಿಗೆ ಈ ಬೆಲೆಯೇರಿಕೆಯ ಹೊರೆ ಯಾಕೆ ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.