ಮಂಗಳೂರು : ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪನೆಯಾಗ ಬೇಕೆನ್ನುವುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದೆ.
ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯ ಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಈ ಜಿಲ್ಲೆಗಳ ಅನೇಕ ವ್ಯಾಜ್ಯಗಳು ಇತ್ತೀಚಿನ ದಿನಗಳಲ್ಲಿ ಹೈಕೋರ್ಟ್‌ಗೆ ಸಲ್ಲಿಕೆಯಾಗುತ್ತಿದ್ದು ಸ್ಥಳೀಯರು ನ್ಯಾಯಕ್ಕಾಗಿ ಬೆಂಗಳೂರಿಗೆ
ಹೋಗುವುದು ಆರ್ಥಿಕ ವೆಚ್ಚದ ಜತೆಗೆ ಅನೇಕ ಅನಾನುಕೂಲತೆಗಳನ್ನು ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ಪೀಠಕ್ಕಾಗಿ ದ.ಕ .ವಕೀಲರ ಸಂಘದ ಮನವಿಯು ನ್ಯಾಯಯೋಜಿತವಾಗಿದೆ . ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಗಮನ
ಸೆಳೆಯಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.