ಜಿಲ್ಲೆ

ದೇರಳಕಟ್ಟೆ ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ

Mangaluru - Hariprasad Rai


ಮಂಗಳೂರು : ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಹಾಗೂ ಇರಿತಕ್ಕೊಳಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ವಿಜಯಕುಮಾರ್ ಶೆಟ್ಟಿ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ರಾಜೇಂದ್ರ ಶೆಟ್ಟಿ, ಕಿರಣ್ ರೈ, ಉಪಸ್ಥಿತರಿದ್ದರು.