ಬೆಳ್ತಂಗಡಿ: ತಾಲೂಕಿನ ಬಳಂಜ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ 2ಕೋಟಿ ರೂ.ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮನವಿ ನೀಡಿದರು.
ಬಳಂಜ ಹಿರಿಯ ಪ್ರಾಥಮಿಕ ಶಾಲೆಯು 75ವರ್ಷಗಳನ್ನು ಪೂರೈಸುತ್ತಿದ್ದು ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಶಾಲೆಗೆ ಮೂಲ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿ ನಿರ್ಮಾಣ ಅವಶ್ಯಕವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.