ಪುತ್ತೂರು: ಬಡವರ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕೆಂಬ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ. ಗೃಹಲಕ್ಷ್ಮಿಯಲ್ಲಿ ಶೇ.೯೮ರಷ್ಟು ಸಾಧನೆ ಮಾಡಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೨೬೧ ಕೋಟಿ ರೂ. ಬಡವರ ಮನೆಗೆ ಹೋಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿನಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ, ಯುವನಿಽ ವಿಶೇಷ ನೋಂದಣಿ ಅಭಿಯಾನ ಹಾಗೂ ಗ್ಯಾರಂಟಿ ಅಹವಾಲು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಜಾರಿಗೆ ಬಂದ ಗ್ಯಾರಂಟಿ ಇಂದು ದೇಶದ ಉಳಿದ ರಾಜ್ಯದಲ್ಲಿಯೂ ಜಾರಿಯಾಗುತ್ತಿದೆ. ಬೇರೆ ದೇಶಗಳಲ್ಲಿ ಹಲವು ವರ್ಷಗಳ ಹಿಂದೆಯೇ ನಾಗರಿಕರಿಗೆ ವಿವಿಧ ಯೋಜನೆಯ ಮೂಲಕ ಹಣ ನೀಡಲಾಗುತ್ತಿದೆ. ಪ್ರತಿ ಪದವಿ ಕಾಲೇಜುಗಳಲ್ಲಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಂಡು ಯುವನಿಽ ನೊಂದಾವಣೆಯನ್ನು ಶೇ.೧೦೦ರಷ್ಟು ಸಾಽಸಬೇಕು ಎಂದು ತಿಳಿಸಿದರು.
ಶಿಬಿರದಲ್ಲಿ ಪುತ್ತೂರು ನಗರ ಸಭೆ, ಆರ್ಯಾಪು, ಬನ್ನೂರು, ಕುಡಿಪ್ಪಾಡಿ, ಕಬಕ, ಬಲ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ದ.ಕ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ, ಜಿಲ್ಲಾ ಸದಸ್ಯ ಪೂರ್ಣೇಶ್ ಭಂಡಾರಿ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಮಹಮ್ಮದ್ ಬಡಗನ್ನೂರು, ಸಿಡಿಪಿಒ ಮಂಗಳ ಕಾಳೆ, ಮೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ರಾಮಚಂದ್ರ, ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಶ್ರೀಕಾಂತ, ಆಹಾರ ನಿರೀಕ್ಷಕ ಜಿತೇಶ್, ಕೌಶಲಾಭಿವೃದ್ಧಿ ಇಲಾಖೆಯ ದಯಾನಂದ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಕಾರ್ಯನಿರ್ವಹಣಾಽಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ವಂದಿಸಿದರು. ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.