ಜಿಲ್ಲೆ

ಕಾಂಗ್ರೆಸ್‌ನಿಂದ ಅಭಿವೃದ್ಧಿ ಕಾರ್ಯ

ಮಸ್ಕಿ: ಬಡವರ ಬಗ್ಗೆ ಚಿಂತನೆ ಮಾಡುವ ಏಕಮೇವ ಪಕ್ಷ ಕಾಂಗ್ರೆಸ್‌ವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ಬಡವರಿಗೆ ಬಹಳಷ್ಟು ಉಪಯೋಗವಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಸ್ವಾತಂತ್ರೃ ನಂತರ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇತ್ತೀಚೆಗೆ ಬಂದ ಬಿಜೆಪಿ, ಕಾಂಗ್ರೆಸ್ ಅನ್ನು ಟೀಕಿಸುವ ಭರದಲ್ಲಿ ಜಾತಿಯ ವಿಷ ಬೀಜ ಬಿತ್ತುತ್ತಿದೆ ಎಂದು ಟೀಕಿಸಿದರು.

ಹಿಂದುಳಿದ ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಮಾಡುವ ದಿಸೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಕೆಆರ್‌ಡಿಬಿಗೆ 5 ಸಾವಿರ ಕೋಟಿ ರೂ. ಮೀಸಲಿಟ್ಟು ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದರು.

ಮಸ್ಕಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಹಿಬೂಬಸಾಬ್ ಮುದ್ದಾಪುರ, ಪ್ರಮುಖರಾದ ಬಸಪ್ಪ ಜಂಗಮರಹಳ್ಳಿ, ಬಸವಂತಪ್ಪ ಮಟ್ಟೂರು, ತಾಪಂ ಇಒ ಅಮರೇಶ, ಪ್ರಾಚಾರ್ಯ ಡಾ.ಮಹಾಂತಗೌಡ ಪಾಟೀಲ ಇದ್ದರು.