ಜಿಲ್ಲೆ

ಡಿ.18ರಂದು ಶಾಸಕ ರಾಜೇಶ್ ನಾಯ್ಕ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Mangaluru - Hariprasad Rai



ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ, ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ
ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.