ಕೆಆರ್‌ಎಸ್: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ತಮ್ಮ ಮಾತಿಗೆ ಕ್ಷಮೆಯಾಚನೆ ಮಾಡಿದ್ದಾರೆ.
ಕಾಶ್ಮೀರ ಘಟನೆ ಕುರಿತ ರಮೇಶ ಬಂಡಿಸಿದ್ದೇಗೌಡ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಮಾತ್ರವಲ್ಲದೆ ಟೀಕೆಗಳು ವ್ಯಕ್ತವಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಕೆಆರ್‌ಎಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆಯಾಚನೆ ಮಾಡುತ್ತೇನೆ. ನಾನು ಹಾಗೆ ಹೇಳಬಾರದಿತ್ತು. ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಆದ್ದರಿಂದ ಾನು ಎಲ್ಲರಲ್ಲೂ ಕ್ಷಮೆಯಾಚನೆ ಮಾಡುತ್ತೇನೆ. ಸರ್ಕಾರಗಳು ಭದ್ರತೆಯನ್ನು ಎದುರಿಸಬೇಕು. ಕೃತ್ಯ ಎಸಗಿದವರ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕು. ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದಿದ್ದಾರೆ.