ಬೆಂಗಳೂರು: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಲ್ಲೂ ಕರೊನಾ ಪಾಸಿಟಿವ್ ದೃಢಪಟ್ಟಿದೆ. ವಿಶೇಷವೆಂದರೆ ಇವರು ಈ ಹಿಂದೆ 9 ಸಲ ಕೋವಿಡ್-19 ಟೆಸ್ಟ್ಗೆ ಒಳಗಾಗಿದ್ದು, ಹತ್ತನೇ ಪರೀಕ್ಷೆಯಲ್ಲಿ ಸೋಂಕು ಕಂಡುಬಂದಿದೆ.
ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಮಾಡಿಸಿದ್ದ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಶಾಸಕರು ಹೇಳಿಕೊಂಡಿದ್ದಾರೆ.