ಮದ್ದೂರು ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಶಾಸಕ ಕೆ.ಎಂ.ಉದಯ್ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯತೀಶ್, ಹರೀಶ್, ಪುಟ್ಟೇಗೌಡ ಇದ್ದರು. 
ಜಿಲ್ಲೆ

ಮದ್ದೂರು ಸರ್ಕಾರಿ ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ

ಮದ್ದೂರು: ಪಟ್ಣಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ಶಾಸಕ ಕೆ.ಎಂ.ಉದಯ್ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆ ಒಳರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ರೋಗಿಗಳ ಹಿತದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಥಳದಲ್ಲಿದ್ದ ವೈದ್ಯರಿಂದ ಮಾಹಿತಿ ಪಡೆದರು.

ರಾತ್ರಿ ವೇಳೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಹಾಜರಾತಿ ಮತ್ತು ಕರ್ತವ್ಯ ಪಾಲನೆ ಬಗ್ಗೆ ಪರಿಶೀಲನೆ ಮಾಡಿದರು. ನಂತರ ರೋಗಿಗಳ ಸಮಸ್ಯೆಗಳು ಹಾಗೂ ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ವೈದ್ಯರು ರೋಗಿಗಳ ಜತೆ ಸ್ನೇಹಪೂರ್ವಕವಾಗಿ ನಡೆದುಕೊಳ್ಳುವಂತೆ ಸ್ಥಳದಲ್ಲಿದ್ದ ವೈದ್ಯರಿಗೆ ತಿಳಿಸಿದರು.

ಮುಖಂಡರಾದ ಹರೀಶ್, ಯತೀಶ್, ಪುಟ್ಟೇಗೌಡ ಇದ್ದರು.