ಜಿಲ್ಲೆ

ರಸ್ತೆಯಲ್ಲಿ ಓಡಾಡುವವರಿಗೆ ಕಾಂಗ್ರೆಸ್ ಬರೆ

ಇಂದಿರಾ ಎನ್ ಕೆ

ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದು ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡೆಸಿ ಜನಸಾಮಾನ್ಯರ ಮೇಲೆ ಹೊರೆ ಹೊರಿಸಿತ್ತು. ಇದೀಗ ರಸ್ತೆಯಲ್ಲಿ ಓಡಾಡುವರಿಂದ ಸುಂಕ ವಸೂಲಾತಿಗೆ ಇಳಿದಿದೆ ಎಂದು ಶಾಸಕ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಟೋಲ್ ಸಂಗ್ರಹ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ಸಿನಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲೆ ಪ್ರತಿಭಟನೆ ನಡೆದಿತ್ತು. ನಿಮ್ಮದೇ ಸರ್ಕಾರ ವಿರುದ್ಧ ನೀವೇ ಪ್ರತಿಭಟನೆಗೆ ಇಳಿದಿರುವುದು ನೋಡಿದರೆ ನಿಮ್ಮ ಸರ್ಕಾರದ ಸಚಿವರು ನಿಮ್ಮ ಕೈಗೆ ಸಿಗುತಿಲ್ಲ ಎಂಬುದು ಅರ್ಥವಾಗುತ್ತಿದೆ. ಸರ್ಕಾರ ಈ ಕೂಡಲೇ ಪಡುಬಿದ್ರಿ- ಕಾರ್ಕಳ ನಡುವೆ ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ನಿರ್ಧಾರ ಕೈ ಬಿಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.